Focus News 18

Bengaluru - ಚುನಾವಣೆ ಒಳ ಒಪ್ಪಂದದ ಬಗ್ಗೆ ತನಿಖೆ ಮಾಡಿಸಿ: ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಕಳೆದ ವಿಧಾನಸಭೆ ಚುನಾವಣೆಯಲ್ಲಿ ಅಡ್ಜಸ್ಟ್ ಮೆಂಟ್ ರಾಜಕೀಯದ ಬಗ್ಗೆ ಸ್ವತಃ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಅವರೇ ಮಾತನಾಡಿದ್ದಾರೆ! ಈ ಸರಕಾರ ಆ ಬಗ್ಗೆ ತನಿಖೆ ಮಾಡಿಸುತ್ತಾ? ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಕಾಂಗ್ರೆಸ್ ಸರಕಾರವನ್ನು ಪ್ರಶ್ನೆ ಮಾಡಿದ್ದಾರೆ.


ಪಕ್ಷದ ಕಚೇರಿ ಮಾಧ್ಯಮಗಳ ಜತೆ ಮಾತನಾಡುವ ವೇಳೆ ಈ ಪ್ರಶ್ನೆ ಎತ್ತಿದ ಮಾಜಿ ಮುಖ್ಯಮಂತ್ರಿ ಅವರು; ಹಿಂದಿನ ಸರಕಾರದ ಎಲ್ಲ ನಿರ್ಧಾರಗಳನ್ನು ಈಗಿನ ಸರಕಾರ ತನಿಖೆ ನಡೆಸುವುದಾಗಿ ಹೇಳುತ್ತಿದೆ. ಹಾಗಾದರೆ, ಚುನಾವಣಾ ಒಳಒಪ್ಪಂದದ ಬಗ್ಗೆಯೂ ತನಿಖೆ ಮಾಡಿಸಬೇಕಲ್ಲವೇ ಎಂದರು.

ಸಿಟಿ ರವಿ ಒಂದು ಹೇಳಿಕೆ ಗಮನಿಸಿದ್ದೇನೆ. ಕಾಂಗ್ರೆಸ್ ಮತ್ತು ಬಿಜೆಪಿ ಒಳ ಒಪ್ಪಂದ ಮಾಡಿಕೊಂಡಿದ್ದಾರೆ ಎಂದು ಅವರು ಹೇಳಿದ್ದಾರೆ. ನಾನು ಕಾಂಗ್ರೆಸ್ ನಾಯಕರನ್ನು ಕೇಳುತ್ತೇನೆ ಯಾವ ಜತೆ ಒಪ್ಪಂದ ಮಾಡಿಕೊಂಡಿದ್ದಿರಿ, ನಮ್ಮನ್ನು ಬಿಜೆಪಿ ಬೀ ಟೀಮ್ ಎಂದು ಹೇಳುತ್ತಿದ್ದವರು ನೀವು. ಹಿಂದೆಯೇ ನಾನು ಈ ಬಗ್ಗೆ ಹೇಳಿದ್ದೆ. ಅದು ಸತ್ಯವಾಗಿದೆ. ಈಗ ಹೇಳಿ ನೀವು ಯಾವ ಟೀಮ್? ನೀವು ಇದನ್ನು ತನಿಖೆ ಮಾಡಿಸುತ್ತೀರಾ? ಎಂದು ಅವರು ಕೇಳಿದರು.

ನಾವು ಯಾವ ಪಕ್ಷದ ಜತೆಯೂ ಒಪ್ಪಂದ ಮಾಡಿಕೊಳ್ಳದೆ 20 ಕ್ಷೇತ್ರಗಳಲ್ಲಿ ಗೆದ್ದಿದ್ದೇವೆ ಎಂದು ಅವರು ಪರ್ಷೆಯೊಂದಕ್ಕೆ ಉತ್ತರ ನೀಡಿದರು.

ಬೆಂಗಳೂರು ಘಟಕದ ಸಭೆ:

ಪಕ್ಷದ ಸಂಘಟನೆ ದೃಷ್ಟಿಯಿಂದ ಬೆಂಗಳೂರು ಮಹಾನಗರದ ಮುಖಂಡರ ಸಭೆಯನ್ನು ಮಾಜಿ ಮುಖ್ಯಮಂತ್ರಿಗಳು ನಡೆಸಿದರು.

ಈ ಬಗ್ಗೆ ಮಾಹಿತಿ ನೀಡಿದ ಅವರು; ಸಂಘಟನೆಯನ್ನು ಗಂಭೀರವಾಗಿ ತೆಗೆದುಕೊಂಡಿದ್ದೇವೆ. ಯುವಕರಿಗೆ ಶಕ್ತಿ ತುಂಬು ಕೆಲಸ ಮಾಡುತ್ತಿದ್ದೇನೆ. ಪಕ್ಷ ಸಂಘಟನೆಯಲ್ಲಿ ಭಾಗಿಯಾಗದವರನ್ನು ಪಕ್ಷದಿಂದ ತೆಗೆಯುತ್ತೇವೆ. ಅರ್ಹತೆ ಆಧಾರ ಮತ್ತು ಸಮುದಾಯದ ಆಧಾರದ ಮೇಲೆ ನಾನು ಅಧಿಕಾರ ಹೊಣೆಗಾರಿಕೆ ಕೊಡುತ್ತೇವೆ ಎಂದರು.

ಮುಂದಿನ ಬಿಬಿಎಂಪಿ ಚುನಾವಣೆಗೆ ಪಕ್ಷವನ್ನು ಸಜ್ಜು ಮಾಡಲಾಗುತ್ತಿದೆ. ಆ ನಿಟ್ಟಿನಲ್ಲಿ ಮುಖಂಡರ ಜತೆ ಸುದೀರ್ಘ ಸಮಾಲೋಚನೆ ನಡೆಸಲಾಗಿದೆ ಎಂದು ಅವರು ಹೇಳಿದರು.

ಮಾಜಿ ಸಚಿವ ಬಂಡೆಪ್ಪ ಕಾಶೇಂಪೂರ್, ಜೆಡಿಎಸ್ ನಗರ ಘಟಕದ ಅಧ್ಯಕ್ಷ ಹೆಚ್.ಎಂ.ರಮೇಶ್ ಗೌಡ, ವಿಧಾನ ಪರಿಷತ್ ಸದಸ್ಯರಾದ ಟಿ.ಎ.ಶರವಣ, ಯಶವಂತಪುರದ ಅಭ್ಯರ್ಥಿ ಜವರಾಯಿ ಗೌಡ ಸೇರಿದಂತೆ ಬೆಂಗಳೂರು ನಗರದ ಅನೇಕ ಮುಖಂಡರು ಸಭೆಯಲ್ಲಿ ಭಾಗಿಯಾಗಿದ್ದರು.


Bengaluru: BJP National General Secretary CT Ravi himself has spoken about adjustment politics in the last assembly elections! Is this government investigating that? Former Chief Minister HD Kumaraswamy questioned the Congress government.


 The former Chief Minister raised this question while talking to the media at the party office; The current government is saying that it will investigate all the decisions of the previous government. So, shouldn't there be an investigation into the electoral collusion?

 I noticed a statement from CT Ravi. He said that Congress and BJP have made an internal agreement. I will ask the Congress leaders with whom you had an agreement, you are the one who called us BJP Bee Team. I have told about this before. That is the truth. Now tell me which team are you? Will you investigate this? he asked.

 He replied to a question that we have won 20 constituencies without any alliance with any party.

 Bangalore Unit Meeting:

 The former chief minister held a meeting of the leaders of Bengaluru metropolis in view of the organization of the party.

 He informed about this; We have taken the organization seriously. I am working to empower the youth. Those who are not involved in the party organization will be removed from the party. He said that we will give power and responsibility on the basis of merit and community.

 The party is gearing up for the next BBMP elections. He said that a long consultation was held with the leaders in that regard.

 Former Minister Bandappa Kashempur, JDS City Unit President HM Ramesh Gowda, Vidhan Parishad member TA Saravan, Yeshavantpur candidate Javarai Gowda, many leaders of Bangalore city were involved in the meeting.

Post a Comment

Previous Post Next Post
Focus News 18

Contact Form