Focus News 18

Bengaluru - ಶಾಲಾ ವಿದ್ಯಾರ್ಥಿಗಳಿಗೆ ಮೊಟ್ಟೆ, ಬಾಳೆ ಹಣ್ಣು ವಿತರಿಸಲು ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ಶಾಲಾ ವಿದ್ಯಾರ್ಥಿಗಳಿಗೆ ಮೊಟ್ಟೆ, ಬಾಳೆ ಹಣ್ಣು ವಿತರಿಸಲು ರಾಜ್ಯ ಸರ್ಕಾರ ಆದೇಶಿಸಿದೆ.


1 ರಿಂದ 8ನೇ ತರಗತಿಯ ವಿದ್ಯಾರ್ಥಿಗಳಿಗೆ ಮೊಟ್ಟೆ ವಿತರಣೆ ಮಾಡುವಂತೆ ಇಂದು(ಜೂನ್ 21) ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಶುಭ ಕಲ್ಯಾಣ್ ನಿರ್ದೇಶಕರು ಪಿ. ಎಂ. ಪೋಷಣ್, ಶಾಲಾ ಶಿಕ್ಷಣ ಇಲಾಖೆ ಬೆಂಗಳೂರು ಈ ಕುರಿತು ಸುತ್ತೋಲೆ ಹೊರಡಿಸಿದ್ದು, ರಾಜ್ಯದ ಎಲ್ಲಾ ಜಿಲ್ಲೆಗಳ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ 1-8ನೇ ತರಗತಿ ಮಕ್ಕಳಿಗೆ ಪೂರಕ ಪೌಷ್ಟಿಕ ಆಹಾರವಾಗಿ ಬೇಯಿಸಿದ ಮೊಟ್ಟೆ (ಮೊಟ್ಟೆ ಸ್ವೀಕರಿಸದ ಮಕ್ಕಳಿಗೆ ಬಾಳೆ ಹಣ್ಣು ಅಥವಾ ಶೇಂಗಾ ಚಿಕ್ಕಿ) ವಿತರಿಸುವಂತೆ ಸೂಚಿಸಿದ್ದಾರೆ.
ಮಧ್ಯಾಹ್ನದ ಬಿಸಿಯೂಟದ ಜೊತೆಗೆ 1ರಿಂದ 8ನೇ ತರಗತಿ ಮಕ್ಕಳಿಗೆ ಅಪೌಷ್ಠಿಕತೆ ಮತ್ತು ಅನಿಮಿಯ ನಿವಾರಣೆಗಾಗಿ ಪೂರಕ ಪೌಷ್ಠಿಕ ಆಹಾರವಾಗಿ ಬೇಯಿಸಿದ ಮೊಟ್ಟೆ(ಮೊಟ್ಟೆ ತಿನ್ನದ ವಿದ್ಯಾರ್ಥಿಗಳಿಗೆ ಬಾಳೆ ಹಣ್ಣು ಅಥವಾ ಶೇಂಗಾ ಚಿಕ್ಕಿ) ಒಬ್ಬ ವಿದ್ಯಾರ್ಥಿಗೆ ವಾರದಲ್ಲಿ ಒಂದು ಮೊಟ್ಟೆಯಂತೆ ಮೊದಲ ಹಂತದಲ್ಲಿ ದಿನಾಂಕ 20-8-2-23ರಿಂದ ಪ್ರಾರಂಭಿಸಿ 15-723 ರವರೆಗೆ ಸರ್ಕಾರದ ಮುಂದಿನ ಆದೇಶ ಬರುವವರೆಗೂ ವಿತರಿಸುವಂತೆ ಈ ಮೂಲಕ ತಿಳಿಸಲಾಗಿದೆ. ಈ ಸಂಬಂಧ ಪ್ರತಿ ವಿದ್ಯಾರ್ಥಿಗೆ ಒಂದು ದಿನಕ್ಕೆ ಒಂದು ಮೊಟ್ಟೆ/ಬಾಳೆ ಹಣ್ಣು/ಶೇಂಗಾ ಚಿಕ್ಕಿಯ ಘಟಕ ವೆಚ್ಚ 8ರೂ.ರಂತೆ ನಿಗದಿಪಡಿಸಿರುತ್ತದೆ. ಇದರಂತೆ ಭರಿಸಲು ಸೂಚಿಸಿದೆ ಎಂದು ಸುತ್ತೋಲೆಯಲ್ಲಿ ಉಲ್ಲೇಖಿಸಲಾಗಿದೆ.

Bengaluru: The state government has ordered to distribute eggs and bananas to school students.


 Today (June 21) the state government has issued an order to distribute eggs to the students of class 1 to 8.
 Shubha Kalyan Director P. M. Poshan, School Education Department, Bangalore has issued a circular in this regard, instructing to distribute boiled eggs (for children who do not receive eggs, banana fruit or peanut chicks) as supplementary nutritious food to the children of classes 1-8 of government and aided schools in all districts of the state.

 Boiled egg as supplementary nutritional food for children of class 1 to 8 along with mid-day meal (banana fruit or chickpea for non-egg-eating students) as one egg per week starting from 20-8-2-23 till 15-723 till further orders of the government. It is hereby notified to distribute. In this regard, the unit cost of one egg/banana fruit/coconut chick per day for each student is fixed at Rs.8. It is mentioned in the circular that it is directed to be paid as such.

Post a Comment

Previous Post Next Post
Focus News 18

Contact Form