Focus News 18

Bihar - ಬಿಹಾರದಲ್ಲಿ ಸೇತುವೆ ಕುಸಿತ: ವಿನ್ಯಾಸದಲ್ಲಿಯೇ ದೋಷ ಎಂದ ಸಿಎಂ ನಿತೀಶ್ ಕುಮಾರ್

ಪಾಟ್ನಾ : ಗಂಗಾ ನದಿಯ ಮೇಲೆ ನಿರ್ಮಾಣ ಹಂತದಲ್ಲಿದ್ದ ಸೇತುವೆ ಕುಸಿದಿದ್ದು, ಈ ಕುರಿತಾಗಿ ಪ್ರತಿಕ್ರಿಯೆ ನೀಡಿದ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಸೇತುವೆ ವಿನ್ಯಾಸವೇ ದೋಷಪೂರಿತವಾಗಿತ್ತು ಎಂದು ಹೇಳಿದ್ದಾರೆ.


ಈ ಬಗ್ಗೆ ಮಾತನಾಡಿದ ಸಿಎಂ ನಿತೀಶ್ ಕುಮಾರ್, ತಪ್ಪಿತಸ್ಥರ ವಿರುದ್ಧ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

2022ರಲ್ಲಿಯೂ ಇದೇ ಸೇತುವೆ ಕುಸಿದು ಬಿದ್ದಿತ್ತು ಎನ್ನುವ ಮಾಹಿತಿಯನ್ನೂ ನೀಡಿದ್ದಾರೆ. ನಿನ್ನೆ ಕುಸಿದ ಸೇತುವೆ ಕಳೆದ ವರ್ಷವೂ ಕುಸಿದಿತ್ತು. ಕಠಿಣ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಈ ಸೇತುವೆಯ ನಿರ್ಮಾಣ ಕಾರ್ಯ ಸರಿಯಾಗಿ ಆಗದ ಕಾರಣ ಮತ್ತೆ ಮತ್ತೆ ಕುಸಿಯುತ್ತಿದೆ. ಇಲಾಖೆಯು ಈ ಕುರಿತಾಗಿ ಪರಿಶೀಲನೆ ನಡೆಸಲಿದ್ದು, ಆ ಬಳಿಕ ಕ್ರಮ ಕೈಗೊಳ್ಳಲಿದ್ದೇವೆ ಎಂದು ಸಿಎಂ ತಿಳಿಸಿದ್ದಾರೆ. ಘಟನೆಯ ನಂತರ ನಿತೀಶ್ ಕುಮಾರ್ ತಕ್ಷಣವೇ ತನಿಖೆಗೆ ಆದೇಶ ನೀಡಿದ್ದಾರೆ.

Patna: Bihar Chief Minister Nitish Kumar has commented on the collapse of the under-construction bridge over the Ganga river and said that the bridge design itself was flawed.


 Talking about this, CM Nitish Kumar said that necessary action will be taken against the culprits.

 He also gave information that the same bridge had collapsed in 2022. The bridge that collapsed yesterday also collapsed last year. I have instructed the authorities to take strict action. This bridge is collapsing again and again due to improper construction work. The CM said that the department will conduct a review in this regard, after which action will be taken. After the incident, Nitish Kumar ordered an immediate investigation.

Post a Comment

Previous Post Next Post
Focus News 18

Contact Form