Focus News 18

Gubbi - ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ಯಲ್ಲಿ ಉತ್ತಿರ್ಣ್ ರಾದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಗುಬ್ಬಿ : ಶಿಕ್ಷಣ ಕ್ಷೇತ್ರದಲ್ಲಿ ಬಡ ಹಾಗೂ ರೈತರ ಮಕ್ಕಳನ್ನು ಗುರುತಿಸಿ ಬೆಳೆಸುವುದು ನಮ್ಮೆಲ್ಲರ ಜವಬ್ದಾರಿಯಾಗಿದೆ ಎಂದು ಆರ್ಯವೈಶ್ಯ ಮಂಡಳಿ ಅಧ್ಯಕ್ಷ ಬಿ.ಎನ್.ಮಾರುತಿ ಕುಮಾರ್ ತಿಳಿಸಿದರು.

 ತಾಲ್ಲೂಕಿನ ಎಂ ಎನ್ ಕೋಟೆ ಸಮುದಾಯ ಭವನದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ದ್ವೀತಿಯ ಪಿಯುಸಿ ಹಾಗೂ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಮಾತನಾಡಿದ ಅವರು ಗ್ರಾಮೀಣ ಭಾಗದಲ್ಲಿ ನಾನಾ ಕಷ್ಠಗಳಿಗೆ ತುತ್ತಾಗಿರುವ ವಿದ್ಯಾರ್ಥಿಗಳನ್ನು ಗುರುತಿಸಿ ಶಿಕ್ಷಣ ನೀಡಬೇಕಿರುವುದು ನಮ್ಮ ಜವಬ್ದಾರಿಯಾಗಿದೆ.ಇತ್ತೀಚಿನ ದಿನಗಳಲ್ಲಿ ರೈತರ ಮಕ್ಕಳು ಮಧ್ಯೆದಲ್ಲಿ ಶಿಕ್ಷಣ ಬೀಡುತ್ತಿರುವುದು ಹೆಚ್ಚುತ್ತಿರುವುದು ಕಂಡು ಬರುತ್ತಿದೆ. ಅಂತಹ ವಿದ್ಯಾರ್ಥಿಗಳನ್ನು ಗುರುತಿಸಿ ಶಿಕ್ಷಣ ಕೊಡಿಸಬೇಕು ಎಂದರು. ಗ್ರಾಮೀಣ ಭಾಗದಲ್ಲಿ ಉನ್ನತ ಶಿಕ್ಷಣಕ್ಕೆ ಮೂಲಭೂತ ಸೌಕರ್ಯಗಳು ಇಲ್ಲದಂತಾಗಿದೆ.ಅಂಥ ಮಕ್ಕಳನ್ನು ಗುರುತಿಸಿ ಅವರಿಗೆ ಆರ್ಥಿಕವಾಗಿ ಕೈಜೋಡಿಸಬೇಕು ಎಂದು ತಿಳಿಸಿದರು.
ಕೂಲಿ ಕಾರ್ಮಿಕರ ಮಕ್ಕಳು ಶಾಲೆ ಬಿಡುವುದು ಸರ್ವೇಸಾಮಾನ್ಯವಾಗಿದೆ ಅಂತ ಮಕ್ಕಳಿಗೆ ಮಾರ್ಗದರ್ಶನ ನೀಡುವುದರ ಜೊತೆಗೆ ಸರ್ಕಾರ ಸವಲತ್ತು ಹಾಗೂ ನಮ್ಮಗಳ ಸಹಾಯ ಅವಶ್ಯಕತ್ತೆ ಇದೆ ಆದ್ದರಿಂದ ಗ್ರಾಮೀಣ ಪ್ರದೇಶದ ಮಕ್ಕಳಿಗೆ ಹೆಚ್ಚು ಹೊತ್ತು ನೀಡಬೇಕು ಇತ್ತೀಚಿನ ದಿನಗಳಲ್ಲಿ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳೇ ಶಿಕ್ಷಣ ಕ್ಷೇತ್ರಗಳಲ್ಲಿ ಪ್ರತಿಭೆಗಳಾಗಿ ಸಾಧನೆ ಮಾಡುತ್ತಿರುವುದು ನಮಗೆಲ್ಲರಿಗೂ ಖುಷಿ ತಂದಿದೆ ಎಂದರು.  
ಪ್ರತಿ ವರ್ಷ ದ್ವಿತೀಯ ಪಿಯುಸಿ ಹಾಗೂ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡುತ್ತಿದ್ದೇನೆ. ಜೊತೆಗೆ ಶಾಲಾ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸಕ್ಕೆ ತೊಂದರೆಯಾದರೆ ಅಂತಹ ಮಕ್ಕಳಿಗೂ ಕೂಡ ನಾನು ಸಹಾಯ ಮಾಡುತ್ತೇನೆ ಎಂದು ತಿಳಿಸಿದರು. ಇದೇ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಸದಸ್ಯರುಗಳಿಗೆ ಕೂಡ ಸನ್ಮಾನಿಸಲಾಯಿತು.

 ಈ ಸಂಧರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶಶಿಕಲಾ ಯೋಗೀಶ್ , ಉಪಾಧ್ಯಕ್ಷ ದೀಲೀಪ್ ಕುಮಾರ್ , ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಬಿ.ಎನ್.ಉಮೇಶ್ ಬಾಬು , ಬಿಂದು ಮಾರುತಿ ಕುಮಾರ್ , ಮುಖಂಡರಾದ ಕಿರಣ್ ಕುಮಾರ್ , ವಸಂತ್ ಕುಮಾರ್ , ಹಾಗೂ ಗ್ರಾಮಸ್ಥರು ಹಾಜರಿದ್ದರು.

Post a Comment

Previous Post Next Post
Focus News 18

Contact Form