Focus News 18

Bengaluru - ಕಾಲ ಮಿತಿಯಲ್ಲಿ ಯೋಜನೆಗಳನ್ನು ಪೂರ್ಣಗೊಳಿಸಿ, ಸ್ಥಳ ಸಮೀಕ್ಷೆ ನಡೆಸಲು ಸಿಎಂ ಸೂಚನೆ


 ►ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಯೋಜನೆಗಳ ಅನುಷ್ಠಾನ ಸಭೆಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ 2023- 24 ನೇ ಬಜೆಟ್ ನಲ್ಲಿ ಘೋಷಿಸಿರುವ ಯೋಜನೆಗಳ ಅನುಷ್ಠಾನದ ಕುರಿತು ಚರ್ಚಿಸಲು ಇಂದು ಸಭೆ ಜರುಗಿತು.

ನರೇಗಾ ಯೋಜನೆಯಡಿ 5000 ಗೋಮಾಳ ಪ್ರದೇಶಗಳು, 50 ಸಾವಿರ ಎರಕೆ ಹುಲ್ಲುಗಾವಲು ಪ್ರದೇಶಗಳು, 2 ಲಕ್ಷ ಬರ ಪರಿಹಾರ ಕಾಮಗಾರಿಗಳು, 81 ಸಾವಿರ ಪ್ರವಾಹ ನಿಯಂತ್ರಣ ಕಾಮಗಾರಿಗಳು ಹಾಗೂ 4268 ಭೂ ಕುಸಿತ ತಡೆ ಕಾಮಗಾರಿಗಳನ್ನು ಕೈಗೊಳ್ಳಲಾಗುವುದು.

27903 ಗ್ರಾಮಗಳಲ್ಲಿ ಸ್ಮಾಶಾನ ಭೂಮಿಯನ್ನು ಶಾಂತಿಧಾಮಗಳನ್ನಾಗಿ ಅಭಿವೃದ್ಧಿಪಡಿಸುವ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು.
5000 ಶಾಲಾ ಆರಣಗಳನ್ನು ವಿದ್ಯಾಧಾಮಗಳನ್ನಾಗಿ ಉನ್ನತೀಕರಿಸುವುದು. 750 ಗ್ರಾಮ ಸಂತೆಗಳನ್ನು ಹಾಗೂ 27 ಸಾವಿರ ಕೊಳವೆಬಾವಿ ಪುನಶ್ಚೇತನ ಕಾಮಗಾರಿಗಳನ್ನು ಅನುಷ್ಠಾನ ಗೊಳಿಸಲಾಗುವುದು ಎಂದು ಸಚಿವ ಪ್ರಿಯಾಂಕಾ ಖರ್ಗೆ ವಿವರಿಸಿದರು.

ನೀರು ಪೂರೈಕೆ ಕುರಿತು ವರದಿ ಸಲ್ಲಿಸಲು ಸೂಚನೆ

ವರುಣಾ ಕ್ಷೇತ್ರದಲ್ಲಿ ಬಹು ಗ್ರಾಮ ಕುಡಿಯುವ ನೀರಿನ ಯೋಜನೆಯಡಿಯಲ್ಲಿ ಎಷ್ಟು ಕಾಮಗಾರಿಗಳು ಪೂರ್ಣಗೊಂಡಿವೆ, ಎಷ್ಟು ಮನೆಗಳಿಗೆ ಕುಡಿಯುವ ನೀರು ಪೂರೈಕೆಯಾಗುತ್ತಿವೆ ಎಂದು ಭೇಟಿ ನೀಡಿ ಪರಿಶೀಲಿಸಿ ವರದಿ ನೀಡುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.

ವಾರಾಂತ್ಯದಲ್ಲಿ ಗ್ರಂಥಾಲಯ ತೆರೆಯಿರಿ

ಗ್ರಾಮ ಪಂಚಾಯಿತಿ ಗ್ರಂಥಾಲಯ ಗಳನ್ನು ಅರಿವು ಕೇಂದ್ರಗಳನ್ನಾಗಿ ಮೇಲ್ದರ್ಜೆಗೇರಿಸುವ ಮೂಲಕ ಡಿಜಿಟಲ್ ಕಲಿಕಾ ಸಾಮಾಗ್ರಿಗಳು, ವೃತ್ತಿಪರ ಮಾರ್ಗದರ್ಶನ ವ್ಯವಸ್ಥೆ ಸಂವಿಧಾನ ಶೈಕ್ಷಣಿಕ ವ್ಯವಸ್ಥೆ, ವಿಶೇಷ ಚೇತನ ಸ್ನೇಹಿ ತಾಂತ್ರಿಕತೆ ಹಾಗೂ ನುರಿತ ವ್ಯಕ್ತಿಗಳಿಂದ ಜ್ಞಾನಾರ್ಜನೆ ಮುಂತಾದ ಸೌಲಭ್ಯ ಗಳನ್ನು ನೀಡಲಾಗುವ ಯೋಜನೆಯನ್ನು ಉತ್ತಮವಾಗಿ ಕಾರ್ಯಗತಗೊಳಿಸಬೇಕು. ವಾರಾಂತ್ಯದಲ್ಲಿಯೂ ತೆರೆದರೆ ವಿದ್ಯಾರ್ಥಿಗಳಿಗೆ ಅನುಕೂಲ ವಾಗಲಿದೆ ಎಂದರು.

ವಿದ್ಯಾರ್ಥಿಗಳಿಗೆ, ಶಾಲೆಯಿಂದ ಹೊರಗುಳಿದ ಮಕ್ಕಳಿಗೆ ಈ ಯೋಜನೆಯಿಂದ ಅನುಕೂಲವಾಗುತ್ತದೆ. ಮೂರು ವರ್ಷಗಳಲ್ಲಿ ಇದನ್ನು ಜಾರಿ ಮಾಡಬೇಕು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಕೂಸಿನ ಮನೆ

ಆಯವ್ಯಯದಲ್ಲಿ ಹೇಳಿರುವಂತೆ ಮಹಿಳೆಯರಿಗೆ ಹೆಚ್ಚಿನ ಉದ್ಯೋಗಾವಕಾಶಗಳನ್ನು ಕಲ್ಪಿಸಲು ಹಾಗೂ ಆರು ವರ್ಷದ ಒಳಗಿನ ಮಕ್ಕಳ ಆರೋಗ್ಯ , ಪೌಷ್ಟಿಕತೆ ಮತ್ತು ಸುರಕ್ಷತೆಗಾಗಿ ಕೂಸಿನ ಮನೆ ಹೆಸರಿನಲ್ಲಿ ನಾಲ್ಕು ಸಾವಿರ ಕೂಸಿನ ಮನೆಗಳನ್ನು ತೆರೆಯುವ ಕೆಲಸವನ್ನು ಶೀಘ್ರವಾಗಿ ಅನುಷ್ಠಾನಕ್ಕೆ ತರಲು ಮುಖ್ಯಮಂತ್ರಿಗಳು ಸೂಚಿಸಿದರು.

ಮುಖ್ಯಮಂತ್ರಿಗಳ ಫೆಲೋಶಿಪ್ ಗಾಗಿ ಪ್ರತಿ ತಾಲ್ಲೂಕಿನ ಒಬ್ಬ ನುರಿತ ಯುವ ಪದವೀಧರರನ್ನು 24 ತಿಂಗಳ ಅವಧಿಗೆ ಆಯ್ಕೆ ಮಾಡುವುದು 10 ಕೋಟಿ ರೂ.ಗಳನ್ನು ಒದಗಿಸಲಾಗಿದೆ ಎಂದು ಸಚಿವರು ವಿವರಿಸಿದರು.

ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ 400 ಸಮುದಾಯ ಶೌಚಾಲಯ ಸಂಕೀರ್ಣಗಳನ್ನು ತಲಾ 25 ಲಕ್ಷ ಗಳ ವೆಚ್ಚದಲ್ಲಿ ನಿರ್ಮಾಣ ಕಾರ್ಯವನ್ನು ಆಧುನಿಕ ತಂತ್ರಜ್ಞಾನ ಬಳಸಿ ಕಾರ್ಯಗತ ಮಾಡಲು ಮುಖ್ಯಮಂತ್ರಿಗಳು ಸೂಚಿಸಿದರು.

ಜಲ್ ಜೀವನ್ ಮಿಷನ್ ಯೋಜನೆಯಡಿ 800 ಗ್ರಾಮಗಳಿಗೆ ಕಾಮಗಾರಿ ಪೂರ್ಣಗೊಂಡಿದೆ ಎಂದು ಸಭೆಯಲ್ಲಿ ವಿವರಿಸಲಾಯಿತು.

ಗ್ರಾಮೀಣ ಪ್ರದೇಶಗಳಲ್ಲಿ ಒಣ ತ್ಯಾಜ್ಯ ವಿಲೇವಾರಿಯಲ್ಲಿ ನಿರಂತರತೆ ಕಾಪಾಡಲು ಹಾಗೂ ವೈಜ್ಞಾನಿಕವಾಗಿ ನಿರ್ವಹಣೆ ಮಾಡಲು 27 ಜಿಲ್ಲೆಗಳಲ್ಲಿ ತಲಾ ಒಂದು ರಿಕವರಿ ಫೆಸಿಲಿಟಿಯನ್ನು ತಲಾ 2 ಕೋಟಿ ವೆಚ್ಚದಲ್ಲಿ ನಿರ್ಮಾಣ. 22 ಕೋಟಿ ರೂ.ಗಳನ್ನು ಪ್ರಸಕ್ತ ಸಾಲಿನಲ್ಲಿ ಒದಗಿಸಲಾಗುವುದು ಎಂದು ಸಚಿವರು ತಿಳಿಸಿದರು.

ಮುಖ್ಯ ಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್ ಗೋಯಲ್, ಆಯುಕ್ತ ಅಂಜುಮ್ ಪರ್ವೇಜ್ ಸಭೆಯಲ್ಲಿ ಉಪಸ್ಥಿತರಿದ್ದರು.

Bengaluru: A meeting was held today under the chairmanship of Chief Minister Siddaramaiah to discuss the implementation of the schemes announced in the 2023-24 Budget of Rural Development and Panchayat Raj Department.

Under the Narega scheme, 5000 cowshed areas, 50 thousand grazing pasture areas, 2 lakh drought relief works, 81 thousand flood control works and 4268 landslide prevention works will be undertaken.

In 27903 villages, the works of developing the graveyard land into Shanti Dhams will be taken up.

Upgradation of 5000 school grounds into Vidya Dhams. Minister Priyanka Kharge explained that 750 village saints and 27 thousand tube well rehabilitation works will be implemented.

Notice to submit report on water supply

The Chief Minister directed to visit and check and report how many works have been completed under the multi-village drinking water scheme in Varuna constituency and how many houses are being supplied with drinking water.

The library is open on weekends

The scheme should be well implemented by upgrading Gram Panchayat libraries as knowledge centers and providing facilities such as digital learning materials, professional guidance system, constitutional educational system, special mind-friendly technology and knowledge acquisition by skilled persons. He said that it will be convenient for the students if it is opened even on weekends.

Students, out-of-school children will benefit from this scheme. The chief minister said that it should be implemented within three years.

Nursing home

As stated in the budget, the Chief Minister suggested to open four thousand nurseries in the name of nurseries for the health, nutrition and safety of children under six years of age to provide more employment opportunities for women.

The minister explained that Rs 10 crore has been provided to select one skilled young graduate from each taluk for the Chief Minister's Fellowship for a period of 24 months.

The Chief Minister directed to implement the construction work of 400 community toilet complexes in Kalyana Karnataka region at a cost of 25 lakhs each using modern technology.

It was explained in the meeting that work has been completed for 800 villages under the Jal Jeevan Mission project.

Construction of one recovery facility in each of 27 districts at a cost of 2 crore each to ensure continuity and scientific management of dry waste disposal in rural areas. The minister informed that Rs.22 crore will be provided in the current year.

Chief Minister's Political Secretary Naseer Ahmed, Chief Secretary Vandita Sharma, Chief Minister's Deputy Chief Secretary Dr. Rajneesh Goyal, Commissioner Anjum Parvez were present in the meeting.

Post a Comment

Previous Post Next Post
Focus News 18

Contact Form